Udupi: ಆ. 1ರಿಂದ ಸೆ. 17; ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ
23/07/2025
ಉಡುಪಿ ಶ್ರೀಕೃಷ್ಣ ಮಠದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆ. 1ರಿಂದ ಸೆ. 17ರವರೆಗೆ ಮಂಡಲ ಪರ್ಯಂತ (48 ದಿನಗಳ ಕಾಲ) ಆಚರಿಸಲಾಗುವುದು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವವನ್ನು
ಜುಲೈ 25ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು. ಈ ಬಾರಿ ಆ.15ರಂದು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 14ರಂದು ಸೌರ ಕೃಷ್ಣ ಜಯಂತಿ ಆಚರಿಸುವ ಮೂಲಕ ಶ್ರೀಕೃಷ್ಣ ಜಯಂತಿಯನ್ನು ಪರಿಪೂರ್ಣವಾಗಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದರು.
ಜು.25ರಂದು ಅಪರಾಹ್ನ 4.30ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಯಶಪಾಲ್ ಸುವರ್ಣ, ಸುರೇಶ ಶೆಟ್ಟಿ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ಉದ್ಯಮಿ ರಾಘವೇಂದ್ರ ರಾವ್ ಬೆಂಗಳೂರು, 'ಬೀಮ' ಜ್ಯುವೆಲ್ಲರ್ಸ್ ನ ವಿಷ್ಣು ಶರಣ್ ಬೆಂಗಳೂರು ಮತ್ತು ಉದ್ಯಮಿ ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿರುವರು.