
Bangalore: ನಟ ದರ್ಶನ್ ಜಾಮೀನು ರದ್ದತಿ ಅರ್ಜಿ ವಿಚಾರಣೆ;ಜು.22ಕ್ಕೆ ಮುಂದೂಡಿಕೆ
18/07/2025 07:18 AM
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬ0ಧಿಸಿ ನಟ ದರ್ಶನ್‌ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಕರ್ನಾಟಕ ಪೊಲೀಸರು ಅಗತ್ಯ ದಾಖಲೆಗಳನ್ನು ಸುಪ್ರೀಂಕೋರ್ಟ್ ಮುಂದೆ ಹಾಜರುಪಡಿಸಿದ್ದು, ದಾಖಲೆ ಪರಿಶೀಲಿಸಿದ ಸುಪ್ರೀಂಕೋರ್ಟ್ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು ಎಂದು ಪ್ರಶ್ನಿಸಿತ್ತು. ದರ್ಶನ್ ಕುಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದರ್ಶನ್ ಪರ ವಕೀಲರು ವಾದಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠವು ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.