Bangalore: ಎಸೆಸೆಲ್ಸಿ, ದ್ವಿತೀಯ ಪಿಯುಸಿ ಉತ್ತೀರ್ಣತೆಗೆ ಕನಿಷ್ಠ ಅಂಕ ಶೇ.33ಕ್ಕೆ ಇಳಿಕೆ; ರಾಜ್ಯ ಸರ್ಕಾರ ಆದೇಶ
25/07/2025
ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತೆಗೆ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ರಾಜ್ಯ ಸರಕಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.
ಹೊಸ ನಿಯಮಗಳ ಪ್ರಕಾರ, ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆಯಲ್ಲಿ ಸರಾಸರಿ ಕನಿಷ್ಠ ಶೇ.33 ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತೀ ವಿಷಯದಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಒಳಗೊಂಡAತೆ ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು. ಹೊಸ ನಿಯಮಗಳಿಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸರಕಾರ 15 ದಿನಗಳ ಕಾಲಾವಕಾಶ ನೀಡಿದೆ. (PHOTO- Freepik)
ರಾಜ್ಯ ಸರಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಾಯ್ದೆ-1966 ಅನ್ನು ತಿದ್ದುಪಡಿ ಮಾಡಿದ್ದು, ಇದರ ಅನ್ವಯ ಉತ್ತೀರ್ಣತೆಯ ಶೇಕಡಾವಾರು ಅಂಕ ಕಡಿತವಾಗಿದೆ. ಪಿಯುಸಿಗೆ ಸಂಬAಧಿಸಿ ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ.