Bangalore:ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ; ಆ.5ರಂದು ಮುಷ್ಕರಕ್ಕೆ ಕರೆ

Bangalore:ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ; ಆ.5ರಂದು ಮುಷ್ಕರಕ್ಕೆ ಕರೆ


ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿAದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. 


ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ ಎಂದು ತಿಳಿದು ಬಂದಿದೆ.  ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್ ಮೂಲಕ ಮುಷ್ಕರದ ಬಗ್ಗೆ ತಿಳಿಸಲಾಗಿದೆ. ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂದು ಮುಖಂಡ ಅನಂತ ಸುಬ್ಬರಾವ್ ತಿಳಿಸಿದ್ದಾರೆ. 








 

Ads on article

Advertise in articles 1

advertising articles 2

Advertise under the article