
Bangalore:ಶಕ್ತಿ ಯೋಜನೆಯ 500ನೇ ಕೋಟಿ ಟಿಕೆಟ್ ವಿತರಣೆ
14/07/2025 07:16 AM
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್‌ಅನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿAದ ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.