
Bangalore: ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಆ. 5 ರಿಂದ ಸಾರಿಗೆ ನೌಕರರ ಧರಣಿ
31/07/2025
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆಗಸ್ಟ್ 5 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 30 ರಂದು ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ಕೈಗೊಂಡರು.
ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದು, ಸಿಎಂಗೆ ಹಾಗೂ ನಾಲ್ಕು ನಿಗಮದ ಎಂಡಿ ಗಳಿಗೆ ಪ್ರತಿಭಟನೆ ಬಗ್ಗೆ ತಿಳಿಸಲಾಗಿದೆ. ಆದರೆ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಸರ್ಕಾರ ಎಸ್ಮಾ ಜಾರಿ ಮಾಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ನೌಕರರು ಎಸ್ಮಾಗೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಆಗಸ್ಟ್ 4 ರಿಂದ ಸಾರಿಗೆ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.