Bangalore:  ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ;  MLC ರವಿಕುಮಾರ್‌ಗೆ ಬಿಗ್ ರಿಲೀಫ್

Bangalore: ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ; MLC ರವಿಕುಮಾರ್‌ಗೆ ಬಿಗ್ ರಿಲೀಫ್


ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಎಂಎಲ್ಸಿ ರವಿಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಗೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಎಂಎಲ್ಸಿ ರವಿಕುಮಾರ್‌ಗೆ ಮಧ್ಯಂತರ ರಿಲೀಫ್ ನೀಡಿದೆ. 
 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆಯಲ್ಲಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ರದ್ದುಗೊಳಿಸುವಂತೆ ಎಂಎಲ್‌ಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ರು. 

ಜುಲೈ 25ರಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ರವಿಕುಮಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ರೆ. ಸರ್ಕಾರದ ಪರವಾಗಿ ಎಸ್ ಪಿಪಿ ಬೆಳ್ಳಿಯಪ್ಪ ವಾದ ಮಂಡಿಸಿದ್ರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದ ಎಂಎಲ್‌ಸಿ ರವಿಕುಮಾರ್ ವಿರುದ್ಧದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ.


Ads on article

Advertise in articles 1

advertising articles 2

Advertise under the article