-->
Bangalore  ಐಪಿಎಸ್ ವಿಕಾಸ್‌ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೊರೆ

Bangalore ಐಪಿಎಸ್ ವಿಕಾಸ್‌ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೊರೆ


ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬAಧಿಸಿದAತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಕ್ರಮದ ವಿರುದ್ಧ ಕರ್ನಾಟಕ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದೆ. ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ.


ಕರ್ನಾಟಕ ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.ಕೊನೆಯದಾಗಿ, ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ. 


Ads on article

Advertise in articles 1

advertising articles 2

Advertise under the article