
Bangalore: ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಸರ್ಕಾರದ ಮಹತ್ವದ ನಿರ್ಧಾರ
11/07/2025 06:18 AM
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಕೆಪಿಎಸ್ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ಘೋಷಿಸಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಯ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.