Bangalore: ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

Bangalore: ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ


ಅಭಿನಯ ಸರಸ್ವತಿ ಎಂದೇ ಜನಪ್ರಿಯತೆ ಗಳಿಸಿದ್ದ  ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ಧೀಮಂತ ಅಭಿನೇತ್ರಿಯಲ್ಲೋರ್ವರು. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಒದಗಿಸಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಅಮೋಘ ಅಭಿನಯಕ್ಕೆ ಹಲವು ಉನ್ನತ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಭೂಷಣ ಪುರಸ್ಕೃತರೂ ಹೌದು.


ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ 'ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀಸರಸ್ವತಿ, ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.

ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲಯಾಳಂನ ಮುತ್ತು ಮಿಂತ್ರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.


ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ:
ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬ ವರ್ಗ ಸಿದ್ದತೆ ನಡೆಸುತ್ತಿದೆ. ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಲ್ಲೆಶ್ವರಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗ ಸಂಪ್ರದಾಯದ0ತೆ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

Ads on article

Advertise in articles 1

advertising articles 2

Advertise under the article