
Bangalore: ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್; ಪೊಲೀಸರಿಂದ ತನಿಖೆ
18/07/2025 06:37 AM
ಬೆಂಗಳೂರಿನಲ್ಲಿ ಸುಮಾರು 40ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಜುಲೈ 18ರಂದು ಬೆಳಗ್ಗೆ ಇ ಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ ಸೇರಿದಂತೆ ಹಲವು ಕಡೆಗಳ 40ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಮಕ್ಕಳನ್ನು ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಲಾಗಿದೆ.