
Bangalore: ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆಗೆ ಒತ್ತಡ;ರಾಜ್ಯಸರ್ಕಾರದಿಂದ ಕೇಂದ್ರಕ್ಕೆ ಮನವಿ
19/07/2025 05:51 AM
ಕರ್ನಾಟಕ ಸರ್ಕಾರವು ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿದೆ. ಈ ಕುರಿತಾಗಿ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ. ಶೀಘ್ರದಲ್ಲೇ ತಂಗಡಗಿ ನೇತೃತ್ವದ ನಿಯೋಗ ದೆಹಲಿಗೆ ತೆರಳಲಿದೆ. 2017 ರಲ್ಲೇ ಬಾವುಟ ಅಧಿಕೃತ ಮಾನ್ಯತೆ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ.