
Bangalore: ರೇಣುಕಾಸ್ವಾಮಿ ಪ್ರಕರಣ; ನಟ ದರ್ಶನ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂ
24/07/2025
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವಾದ-ಪ್ರತಿವಾದವನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಪವಿತ್ರಾ ಗೌಡ , ದರ್ಶನ್ , ಪ್ರದೂಷ್ , ಲಕ್ಷ್ಮಣ್ , ನಾಗರಾಜ್ , ಅನುಕುಮಾರ್ , ಜಗದೀಶ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, "ವಿಕೃತವಾಗಿ ಅಧಿಕಾರ ಚಲಾಯಿಸಲಾಗಿದೆ" ಎಂದು ಕಠೋರ ನುಡಿಗಳಲ್ಲಿ ಹೇಳಿದೆ. ವಾದ ಪ್ರತೀವಾದವನ್ನು ಆಲಿಸಿದ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.