
Bangalore: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ;ಹೈಕೋರ್ಟ್ ಮಹತ್ವದ ಆದೇಶ
16/07/2025 10:23 AM
ಬೆಂಗಳೂರಿನ ಹೆಸರಾಂತ ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ದೇವಾಲಯ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಬುಧವಾರ ಟ್ರಸ್ಟ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ರದ್ದು ಮಾಡಿದೆ. ಮಾತ್ರವಲ್ಲ, ಮುಜರಾಯಿ ಇಲಾಖೆಯ ಸುಪರ್ಧಿಯಲ್ಲೇ ದೇವಸ್ಥಾನ ಮುಂದುವರೆಯುವ0ತೆ ಆದೇಶ ನೀಡಿದೆ. ಸರಕಾರದ ಕ್ರಮ ಪ್ರಶ್ನಿಸಿ ದೇವಾಲಯದ ಟ್ರಸ್ಟ್ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ ಮಂಗಳವಾರ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ ಮಧ್ಯಂತರ ಆದೇಶ ಕಾಯ್ದಿರಿಸಿತು. ಇಂದು ಈ ಪ್ರಕರಣದ ತೀರ್ಪು ನೀಡಿದೆ. ಮುಜರಾಯಿ ಇಲಾಖೆ ಸುಪರ್ದಿಯಲ್ಲೇ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಇರುವಂತೆ ಸೂಚನೆ ನೀಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮಾತ್ರವಲ್ಲ, ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹಣ ದುರುಪಯೋಗ ಮಾಡಿರುವ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಆ ಮೂಲಕ ದೇವಸ್ಥಾನದ ಟ್ರಸ್ಟ್ಗೆ ಭಾರೀ ಹಿನ್ನಡೆ ಉಂಟಾಗಿದೆ. ಮಾತ್ರಲ್ಲ, ಈ ಪ್ರಕರಣಕ್ಕೆ ಸಂಬAಧಿಸಿದ ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿಕೆ ಮಾಡಿದೆ.