
Bangalore: ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು
15/07/2025 06:20 AM
ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕ ಹೈಕೋರ್ಟ್ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿಗಳು:
ಕರ್ನಾಟಕ: ವಿಭು ಬಖ್ರು, ಮಧ್ಯಪ್ರದೇಶ: ಸಂಜೀವ್ ಸಚ್‌ದೇವ, ಜಾರ್ಖಂಡ್: ತರ್ಲೋಕ್ ಸಿಂಗ್ ಚೌಹಾಣ್, ಗುವಾಹಟಿ: ಅಶುತೋಷ್ ಕುಮಾರ್, ಪಟನಾ: ವಿಪುಲ್ ಮನುಭಾಯಿ ಪಂಚೋಲಿ.
ಐವರು ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಕೊಲಿಜಿಯಮ್ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.