
Belman: ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಶಾಖೆ ಶುಭಾರಂಭ
13/07/2025 01:12 PM
ಕಾರ್ಕಳ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ನೂತನ ಶಾಖೆಯು ಬೆಳ್ಮಣ್‌ನಲ್ಲಿ ಶುಭಾರಂಭಗೊ0ಡಿತು. ಬೆಳ್ಮಣ್ ಶೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಘ್ನೇಶ್ ಭಟ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡರಿಕ್ ಮಸ್ಕರೇನಸ್, ಮುನಿಯಲು ಉದಯಕುಮಾರ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಇದ್ದರು.