
Belthangady: ಗೇರು ಪ್ಲಾಂಟೇಶನ್‌ನಲ್ಲಿ ಆನೆ ದಾಳಿ: ವ್ಯಕ್ತಿ ಸಾವು
17/07/2025 09:42 AM
ಕಾಡಾನೆಯೊಂದು ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್‌ನಲ್ಲಿ ಜುಲೈ 17ರ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಆನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.