Belthangady: ವಿಷ ಸೇವಿಸಿ ವಿವಾಹಿತೆ ಆತ್ಮಹತ್ಯೆ; ಕಾರಣ ನಿಗೂಢ
29/07/2025
ವಿವಾಹಿತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ಮರೋಡಿಯಲ್ಲಿ ನಡೆದಿದೆ.
26 ವರ್ಷದ ವಾಣಿಶ್ರೀ ಆತ್ಮಹತ್ಯೆ ಮಾಡಿಕೊಂಡವರು. ವಾಣಿಶ್ರೀ ಅವರಿಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದರು ಎನ್ನಲಾಗಿದೆ. ಮನೆಯಲ್ಲಿ ಹೊಟ್ಟೆ ನೋವೆಂದು ನರಳುತ್ತಿದ್ದ ವಾಣಿಶ್ರೀ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂಧಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.