-->
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನರ ಬಂಧನ

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನರ ಬಂಧನ

Udupi:-ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್ ಬಂಧಿತರು. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ರಾಮ ಮಂದಿರದ ಬಳಿ ಶನಿವಾರ ತಡರಾತ್ರಿ ಗೋವಿನ ರುಂಡ ಪತ್ತೆಯಾಗಿತ್ತು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ನಾಲ್ಕು ತಂಡಗಳನ್ನು ರಚಿಸಿದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದು ೨೪ ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 


ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ಕುಂಜಾಲು ಗ್ರಾಮದ ನಿವಾಸಿ ರಾಮಣ್ಣ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕೇಶವ್ ಎಂಬುವವರು ಹಸು ನೋಡಿಕೊಳ್ಳಲು ಆಗುತ್ತಿಲ್ಲವೆಂದು ರಾಮಣ್ಣನಿಗೆ ನೀಡಿದ್ದರು. ಸಂದೇಶ್ ಎಂಬಾತನ ಸ್ವಿಫ್ಟ್ ಕಾರಿನಲ್ಲಿ ಹಸುವನ್ನು ಸಾಗಾಟ ಮಾಡಲಾಗಿತ್ತು. ಕ್ವಾರಿ ಬಳಿ ಆರೋಪಿಗಳಾದ ಪ್ರಸಾದ್, ನವೀನ್ ಮತ್ತು ರಾಮಣ್ಣ ಮೂವರು ಸೇರಿಕೊಂಡು ಹಸುವನ್ನು ಕಡಿದಿದ್ದರು. ಬಳಿಕ, ಹಸುವಿನ ದೇಹವನ್ನು ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ರಾಮ ಮಂದಿರದ ಬಳಿ ಹಸುವಿನ ತಲೆ ಬಿದ್ದಿದೆ. ಆರೋಪಿಗಳು ಉದ್ದೇಶ ಪೂರ್ವಕವಾಗಿ ಹಸುವಿನ ರುಂಡ ದೇವಸ್ಥಾನದ ಬಳಿ ಇಟ್ಟಿರಲಿಲ್ಲ. ಸಾಗಾಟದ ವೇಳೆ ಆಕಸ್ಮಿಕವಾಗಿ ಹಸುವಿನ ತಲೆ ಬಿದ್ದಿದೆ. ಆರೋಪಿಗಳು ಹಸು ದೇಹ ಸಾಗಿಸಲು ಬಳಸಿದ್ದ ಸ್ಕೂಟಿ, ಕಾರು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ ಶಂಕರ್ ಮಾಹಿತಿ ನೀಡಿದ್ದಾರೆ. 

 

Ads on article

Advertise in articles 1

advertising articles 2

Advertise under the article