ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿAದ ಪತ್ರಿಕಾ ದಿನಾಚರಣೆ
Udupi:- ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗ ದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಲ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಮೂರು ಅಂಗಗಳು ಸರಿಯಾಗಿ ಕೆಲಸ ಮಾಡದೇ ಇದ್ದಾಗ ವಿಮರ್ಶೆ ಮಾಡುವ ಅಧಿಕಾರ ಇರುವುದು ಪತ್ರಿಕಾ ಮಾಧ್ಯಮಕ್ಕೆ. ಪತ್ರಿಕಾ ಸ್ವಾತಂತ್ರ ಬಲಿಷ್ಠವಾಗಿರುವಷ್ಟು ಪ್ರಜಾಪ್ರಭುತ್ವ ಬಲಿಷ್ಠ ಆಗಿರುತ್ತದೆ. ಪತ್ರಿಕಾ ಸ್ವಾತಂತ್ರ ಎತ್ತಿ ಹಿಡಿಯುವ ಹಾಗೂ ಪಾವಿತ್ರತೆ ಕಾಪಾಡುವ ಕೆಲಸ ಅತೀಅಗತ್ಯವಾಗಿದೆ. ಸಮಾಜದ ಮೂರನೇ ಕಣ್ಣು ಮಾಧ್ಯಮ ಸದಾ ಎಚ್ಚರದಿಂದ ಇರಬೇಕು. ಆಗ ಮಾತ್ರ ಸಮಾಜ ಸರಿಯಾದ ದಾರಿಯಲ್ಲಿ ನಡೆಯುತ್ತದೆ ಎಂದು ಹೇಳಿದರು.
.jpeg)
ಕಾರ್ಯಕ್ರಮದಲ್ಲಿ ಮಾಧ್ಯಮ: ಮುಂದಿನ ೧೦ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್,ಎಲ್‌ಎಲ್‌ಎಂ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ರಾಜಾರಾಂ ತಲ್ಲೂರು ಅವರು, ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಕಿçಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.೫೦ ಮಂದಿಯ ಕೆಲಸವನ್ನು ಈ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ ಆಧರಿತ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ನುಂಗಿ ಹಾಕಲಿದೆ ಎಂದು ಅಭಿಪ್ರಾಯಪಟ್ಟರು. ಭಾರತ ೨೦೨೩ರಲ್ಲಿ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್(ಡಿಪಿಡಿಪಿ)-೨೦೨೩ನ್ನು ಅಂಗೀಕರಿಸಿದೆ. ಅದರ ಕರಡು ನಿಯಮಗಳನ್ನು ಈಗಾಗಲೇ ಸರಕಾರ ಪ್ರಕಟಿಸಿದ್ದು, ಅದನ್ನು ಸಾರ್ವಜನಿಕ ಚರ್ಚೆಗಾಗಿ ಇರಿಸಲಾಗಿದೆ. ಬಹಳ ಬೇಗ ಆ ನಿಯಮಗಳು ಜಾರಿಗೆ ಬರಲಿವೆ. ಇದು ಮಾಧ್ಯಮಗಳ ಬದಲಾಗುತ್ತಿರುವ ಸನ್ನಿವೇಶದಲ್ಲಿ ಮಹತ್ವದ ಬೆಳವಣಿಗೆ ಆಗಬಹುದು ಎಂದು ರಾಜಾರಾಂ ತಲ್ಲೂರು ಹೇಳಿದರು.
ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಎಚ್ಪಿಆರ್ ಸಂಸ್ಥೆಗಳ ಮುಖ್ಯಸ್ಥ ಹರಿಪ್ರಸಾದ್ ರೈ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಕುಂಜೂರು ಲಕ್ಷ್ಮೀನಾರಾಯಣ ಕುಂಡAತಾಯ ಅವರಿಗೆ ಪ್ರತಿಕಾ ದಿನದ ಗೌರವವನ್ನು ಸಲ್ಲಿಸಲಾಯಿತು.
ವೇದಿಕೆಯಲ್ಲಿ ವಾರ್ತಾಧಿಕಾರಿ ಮಂಜುನಾಥ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು. ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳ ಪಟ್ಟಿಯನ್ನು ಸಮಿತಿ ಸದಸ್ಯ ಮೈಕಲ್ ರೋಡ್ರಿಗಸ್ ವಾಚಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಉಪನ್ಯಾಸಕರ ಪರಿಚಯ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತೆ ರಾಧಿಕಾ ಕಾರ್ಯಕ್ರಮ ನಿರೂಪಿಸಿದರು.


.jpeg)