-->
ಆಗಸ್ಟ್ ೧ರಿಂದ ಉಡುಪಿ ಕೃಷ್ಣ ಮಠದಲ್ಲಿ ಮಂಡಲ ಉತ್ಸವ;  ಪುತ್ತಿಗೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ

ಆಗಸ್ಟ್ ೧ರಿಂದ ಉಡುಪಿ ಕೃಷ್ಣ ಮಠದಲ್ಲಿ ಮಂಡಲ ಉತ್ಸವ; ಪುತ್ತಿಗೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ

Udupi:- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯಲ್ಲಿ ನಡೆಯಲಿರುವ ೪೮ ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ ೧ರಿಂದ ಸೆಪ್ಟೆಂಬರ್ ೧೫ರವರೆಗೆ ೪೮ ದಿನಗಳ ಕಾಲ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳ ಕಾರ್ಯದರ್ಶಿ ರತೀಶ್ ತಂತ್ರಿ ಮತ್ತು ಬೆಂಗಳೂರು ಶಾಖಾ ಮಠದ ಎ.ಬಿ ಕುಂಜಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 




ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಶ್ರೀ ಕೃಷ್ಣ ಮಠದಿಂದ ಹಲವು ದಶಕಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕೃಷ್ಣಮಠದಿಂದ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿತ್ತು. ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡಿದಾಗಲೂ, ಕೃಷ್ಣ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ದಶಕಗಳ ಹಿಂದೆ ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಹಳೆಯ ಕನಕ ಗೋಪುರ ಶಿಥಿಲಗೊಂಡಿತ್ತು. ಹೀಗಾಗಿ, ಕನಕ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಉಡಪಿ ಶ್ರೀ ಕೃಷ್ಣ ಮಠದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದರು. ಬಳಿಕ, ವಿಶ್ವೇಶತೀರ್ಥ ಶ್ರೀಪಾದರು ಪ್ರತಿಭಟನಾಕಾರರನ್ನು ಕರೆಸಿ ಮಾತನಾಡಿ, ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿದರು. ಅಂದಿನಿAದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ. ಈ ಬಾರಿ ಮತ್ತೆ ಉಡುಪಿ ಶ್ರೀಕೃಷ್ಣಮಠದ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರಾ ಎನ್ನುವುದನ್ನು ಕಾದು ನೋಡಬೇಕಿದೆ. 


Ads on article

Advertise in articles 1

advertising articles 2

Advertise under the article