
Byndoor: ಭಾರೀ ಮಳೆ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
26/07/2025
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೈಂದೂರು ಭಾಗದ ನದಿಗಳೆಲ್ಲಾ ಮೈದುಂಬಿ ಹರಿಯುತ್ತಿದೆ.
ಸೌಪರ್ಣಿಕಾ ನದಿ, ಸುಮನಾವತಿ, ಸಂಕದ ಗುಂಡಿ, ಎಡಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನಾಡ, ನಾವುಂದ, ಮರೆವಂತೆ, ಬಡಾಕೆರೆ ಚಿಕ್ಕಳ್ಳಿ, ಪಡುಕೋಣೆ, ಆನಗಳ್ಳಿ, ಹಳಗೇರಿ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲೂ ಈ ಭಾಗದಲ್ಲಿ ನೆರೆ ಪರಿಸ್ಥಿತಿ ಉಂಟಾಗುತ್ತದೆ. ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.