
Chikmagalur: ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ; ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಕ್ರಮ
16/07/2025 07:54 AM
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ, ರಸ್ತೆ ಕುಸಿತ ಭೀತಿ ಉಂಟಾಗಿದೆ. ಪ್ರವಾಸಿಗರ ಸುರಕ್ಷತೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಪ್ರವಾಸಿಗರು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ, ನೀತಿ ಸಮನ್ವಯ ಸಮಿತಿ ಸಭೆ ನಡೆದಿದೆ. ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.