
Dakshina Kannada: ಮುಂದುವರಿದ ಮಳೆಯ ಅಬ್ಬರ;ಶಾಲೆಗಳಿಗೆ ರಜೆ ಘೋಷಣೆ
19/07/2025 05:07 AM
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಹೀಗಾಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಜುಲೈ 19ರಂದು ಶಾಲೆಗಳಿಗೆ ಆಯಾ ತಾಲೂಕಿನ ತಹಶಿಲ್ದಾರ್ ರಜೆ ಘೋಷಿಸಿದ್ದಾರೆ. ಬಂಟ್ವಾಳ , ಉಳ್ಳಾಲ ಮತ್ತು ಮಂಗಳೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.