Davanagere: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ
28/07/2025
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ "ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ" ಕ್ಕೆ ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.
ದಾವಣಗೆರೆ ನಗರದಲ್ಲಿ ಮನೆಗಳಿಗೆ ಭೇಟಿ ನೀಡಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ಕುರಿತು ನಾಗರಿಕರಿಗೆ ತಿಳಿಸಲಾಯಿತು. ಬಳಿಕ ಪೊಲೀಸ್ ಚಿಣ್ಣರ ಅಂಗಳ, ಪೊಲೀಸ್ ಸ್ಮಾರಕ ಸೇರಿದಂತೆ ಜಿಲ್ಲಾ ಪೊಲೀಸ್ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವ ಡಾ. ಜಿ ಪರಮೇಶ್ವರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್, ಪೂರ್ವ ವಲಯ ಐಜಿಪಿ ಡಾ. ಬಿ.ಆರ್.ರವಿಕಾಂತೇಗೌಡ, ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ , ಜಿಲ್ಲಾ ಪಂಚಾಯತ್ ಸಿಇಒ ಗಿಟ್ಟೆ ಮಾದವ್ ವಿಠಲ್ ರಾವ್ ಮುಂತಾದವರು ಉಪಸ್ಥಿತರಿದ್ದರು.