
Delhi: 20ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ಪರಿಶೀಲನೆ
18/07/2025 06:13 AM
ರಾಷ್ಟç ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಜುಲೈ 18ರಂದು ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿದೆ. ಬಾಂಬ್ ಬೆದರಿಕೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಇಲಾಖೆ ಮತ್ತು ದೆಹಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬAದಿಲ್ಲ. ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದ ಶಾಲೆ, ರೋಹಿಣಿ ಸೆಕ್ಟರ್ 3ರಲ್ಲಿರುವ ಅಭಿನವ್ ಪಬ್ಲಿಕ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಮಾಹಿತಿ ಪಡೆದ ಪೊಲೀಸರು, ಬಾಂಬ್ ನಿಷ್ಕ್ರಿಯದಳ, ಶ್ವಾನದಳ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲ್ಲ ಶಾಲೆಗಳಿಗೆ ಒಂದೇ ರೀತಿಯ ಇಮೇಲ್ ಬರೆಯಲಾಗಿದೆ. ಇಮೇಲ್ ಕಳುಹಿಸಿದ ವ್ಯಕ್ತಿಯ ಬಗ್ಗೆ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರಾಜಧಾನಿಯ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿರುವುದು ಈ ವಾರದಲ್ಲಿ ಇದು ನಾಲ್ಕನೇ ಬಾರಿ. ಕಳೆದ ಸೋಮವಾರ ಸಹ ಬಾಂಬ್ ಬೆದರಿಕೆ ಕರೆ ಬಂದಿತ್ತು. ಪ್ರಕರಣಕ್ಕೆ ಸಂಬ0ಧಪಟ್ಟ0ತೆ ಅಪ್ರಾಪ್ತ ವಯಸ್ಕನೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಬಾಂಬ್ ಬೆದರಿಕೆಯ ನಂತರ ಶಾಲೆಗಳಲ್ಲಿ ಭೀತಿ ಆವರಿಸಿದ್ದು, ಎಲ್ಲಾ ಶಾಲೆಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.