
Dharmathala: ಸರಣಿ ಹತ್ಯೆ ಪ್ರಕರಣ; ತನಿಖೆಗಾಗಿ ಎಸ್‌ಐಟಿ ರಚಿಸಿ ಆದೇಶ
20/07/2025
ಕೆಲ ದಿನಗಳಿಂದ ಸಂಚಲನ ಮೂಡಿಸಿರುವ ಧರ್ಮಸ್ಥಳದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿ ತನಿಖೆ ನಡೆಸಲು ರಾಜ್ಯಸರ್ಕಾರವು ಇದೀಗ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಡಾ. ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರು ಈ ತಂಡದಲ್ಲಿದ್ದಾರೆ. ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವು ಶವಗಳನ್ನು ಹೂತಿರುವುದಾಗಿ ಹೇಳಿಕೊಂಡಿದ್ದ. ತನಗೆ ಬೆದರಿಕೆಯೊಡ್ಡಿ ಶವಗಳನ್ನು ವಿಲೇವಾರಿ ಮಾಡಿಸಿದ್ದು, ಈಗ ಪಾಪಪ್ರಜ್ಞೆ ಕಾಡುತ್ತಿರುವುದಾಗಿ ಹೇಳಿಕೊಂಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಗಳು ಕೂಡಾ ಕೇಳಿ ಬಂದಿತ್ತು. ಇದೀಗ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಆದೇಶಿಸಿದೆ.