
Gangolli: ಮೀನುಗಾರಿಕಾ ದೋಣಿ ದುರಂತ; ಪೊಲೀಸರಿಂದ ಪರಿಶೀಲನೆ
15/07/2025 09:42 AM
ಗಂಗೊಳ್ಳಿ ಸೀ ವಾಕ್ ಪ್ರದೇಶದಲ್ಲಿ ಮೀನುಗಾರಿಕಾ ದೋಣಿ ಮಗುಚಿ ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್, ಕುಂದಾಪುರ ಡಿವೈಎಸ್ಪಿ ಎಚ್,ಡಿ ಕುಲಕರ್ಣಿ ಹಾಗೂ ಗಂಗೊಳ್ಳಿ ಪಿಎಸ್ಐ ಪವನ್ ನಾಯ್ಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೀನುಗಾರಿಕಾ ಇಲಾಖಾ ಅಧಿಕಾರಿಗಳು ಕೂಡಾ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ದೋಣಿ ಕೂಡಾ ಸಮುದ್ರ ಪಾಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.