
Gangolli: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ತೀವ್ರ ಗಾಯ
25/07/2025
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಗಂಗೊಳ್ಳಿಯ ಮುಳ್ಳಿಕಟ್ಟೆ ರಿಕ್ಷಾ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ ರಸ್ತೆಯ ಬದಿ ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ತಾಜುದ್ದೀನ್ ಹಾಗೂ ಚಾಲಕ ತಾಜ್ಮುಲ್ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊ0ಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.