
Gangolli: ಹೃದಯಾಘಾತಕ್ಕೆ ಪೊಲೀಸ್ ಸಿಬ್ಬಂದಿ ಬಲಿ
17/07/2025 07:53 AM
ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್‌ವೊಬ್ಬರು ಮೃತಪಟ್ಟ ಘಟನೆ ಜುಲೈ17ರಂದು ಬೆಳಗ್ಗೆ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಮೃತಪಟ್ಟವರು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ರಾಮಚಂದ್ರ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 17ರಂದು ಬೆಳಗ್ಗೆ ಹೃದಯಾಘಾತದಿಂದ ರಾಮಚಂದ್ರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಮಚಂದ್ರ ಅವರ ಅಕಾಲಿಕ ಸಾವಿಗೆ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.