
Hyderabad: ಬೆಟ್ಟಿಂಗ್ ಆ್ಯಪ್ ಪರ ಪ್ರಚಾರ; ನಟ ಪ್ರಕಾಶ್ ರಾಜ್ ಇಡಿ ಮುಂದೆ ಹಾಜರು
30/07/2025
ಅಕ್ರಮ ಬೆಟ್ಟಿಂಗ್ ಆ್ಯಪ್ ಪರ ಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ನಟ ಪ್ರಕಾಶ್ ರಾಜ್ ಅವರು ಜುಲೈ 30 ರಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಬಶೀರ್‌ಬಾಗ್‌ನಲ್ಲಿರುವ ಪ್ರಾಂತೀಯ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದರು.
ಕಳೆದ ಮಾರ್ಚ್ ತಿಂಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ನಟರ ವಿರುದ್ಧ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಆದರೆ, ಈ ಕುರಿತು ನಂತರ ಸ್ಪಷ್ಟೀಕರಣ ನೀಡಿದ್ದ ಪ್ರಕಾಶ್ ರಾಜ್, ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡುವುದು ಸೂಕ್ತವಲ್ಲ ಅನ್ನಿಸಿದ್ದರಿಂದ, ಆ್ಯಪ್‌ನ ಪ್ರಚಾರದ ಗುತ್ತಿಗೆಯನ್ನು 2017ರ ನಂತರ ನಾನು ನವೀಕರಿಸಿಲ್ಲ ಎಂದು ಹೇಳಿದ್ದರು.
ಕೃಪೆ: ANI