
Karkala:ಪರಶುರಾಮ ಕಂಚಿನ ಪ್ರತಿಮೆ ನಕಲಿ ಎಂದು ಸಾಭೀತು
14/07/2025 03:04 PM
ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಿರ್ಮಿಸಲಾಗಿರುವ ಕಂಚಿನ ಪರಶುರಾಮ ಮೂರ್ತಿ ನಕಲಿ ಎನ್ನುವುದು ಇದೀಗ ಸಾಭೀತಾಗಿದೆ, ಈ ಮೂಲಕ ನಕಲಿ ಕಂಚಿನ ಪ್ರತಿಮೆಯ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ಜಯ ಸಿಕ್ಕಿದೆ. ಪರಶುರಾಮ ಮೂರ್ತಿ ನಕಲಿ ಎಂದು ಕೃಷ್ಣ ಶೆಟ್ಟಿ ಎಂಬವರು 21.06.2024 ರಂದು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಕೃಷ್ಣ ನಾಯಕ್ ಎಂಬವರು ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮುಖಾಂತರ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿ0ದ ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ಕೃಷ್ಣ ಶೆಟ್ಟಿ ಅವರು ದೂರಿನಲ್ಲಿ ತಿಳಿಸಿದ್ದರು. ಠಾಣಾ ಅಪರಾಧ ಕ್ರಮಾಂಕ 120/2024 ಕಲಂ 420.409 ಐಪಿಸಿ ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರೊಜೆಕ್ಟ್ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರು ವರ್ಕ್ ಆರ್ಡರ್ ನಲ್ಲಿ ಇದ್ದ ಷರತ್ತುಗಳನ್ನು ಪಾಲಿಸಿಲ್ಲ ಹಾಗೂ ದಿನಾಂಕ 12.10.2023 ರಂದು ಪರಶುರಾಮ ಮೂರ್ತಿಯ ಸೊಂಟದಿ0ದ ಮೇಲ್ಬಾಗವನ್ನು ಉಮ್ಮಿಕಲ್ ಬೆಟ್ಟದಿಂದ ತಂದು ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬ0ಧಿಸಿರುವ ಶೆಡ್‌ನಲ್ಲಿ 25.02.2024ರ ತನಕ ಇರಿಸಿಕೊಂಡಿದ್ದರು. ಆದರೆ ಮೂರ್ತಿಯ ಸೊಂಟದಿAದ ಮೇಲ್ಬಾಗವನ್ನು ಶಿಲ್ಪಿ ಕೃಷ್ಣ ನಾಯ್ಕ ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ತಪ್ಪು ಮಾಹಿತಿಯನ್ನು ನೀಡಿದ್ದರು. ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಜರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಭೀತಾಗಿದೆ. ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರ ವಂಚನೆ ಕೃತ್ಯ ಸಾಭೀತಾಗಿದೆ. ಅವರ ವಿರುದ್ದ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.