
Kaup: ಹೊಸ ಮಾರಿಗುಡಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ
13/07/2025 12:04 PM
ರಾಜ್ಯ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿಯವರು ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನಕ್ಕೆ ಜುಲೈ 13ರಂದು ಭೇಟಿ ನೀಡಿದರು. ಈ ವೇಳೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಸಚಿವ ಮತ್ತು ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯ ಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.