
Kaup: ಶಕ್ತಿ ಯೋಜನೆ ಕಾರ್ಯಕ್ರಮದ ಸಂಭ್ರಮಾಚರಣೆ
14/07/2025 06:49 AM
ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ, ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣದ ಸಂಭ್ರಮಾಚರಣೆ ಕಾರ್ಯಕ್ರಮವು ಕಾಪು ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ನಡೆಯಿತು. ಮಂಗಳೂರಿನಿ0ದ ಉಡುಪಿಗೆ ಸಂಚರಿಸುವ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಲಾಯಿತು.
ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ, ಶ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲಾಧ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ ಎಂದರು. ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರ ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.