Kaup: ಮಾರಿಗುಡಿಗೆ ನಟ ರಾಜ್ ಬಿ. ಶೆಟ್ಟಿ ಭೇಟಿ; ಮಾರಿಯಮ್ಮ, ಉಚ್ಚಂಗಿಯ ದರ್ಶನ ಪಡೆದ ನಟ
21/07/2025 11:10 AM
ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಮನೆ ಮಾತಾಗಿದ್ದ ಕನ್ನಡ ಚಿತ್ರರಂಗದ ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ನೇತೃತ್ವದಲ್ಲಿ ಇದೀಗ ಅಂತದ್ದೇ ಇನ್ನೊಂದು ಸಿನಿಮಾ "ಸು ಫ್ರಮ್ ಸೋ" ಬಿಡುಗಡೆಗೆ ಸಿದ್ಧವಾಗಿದೆ, ಈ ಹಿನ್ನಲೆಯಲ್ಲಿ ಕಾಪು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.