ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಅನೇಕ ಕಡೆಗಳಲ್ಲಿ ಹಾನಿ ಉಂಟಾಗಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 30 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.