
Kollur: ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠ ಆದೇಶ
13/07/2025 12:56 PM
ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಭೂ ಅತಿಕ್ರಮಣಗಳ ವಿರುದ್ಧ ದಾಖಲಾಗಿರುವ ದೂರು ಅರ್ಜಿಯ ವಿಚಾರಣೆ ನಡೆಸುತ್ತಿರುವ ಚೆನೈಯಲ್ಲಿನ ಸರ್ವೋಚ್ಚ ನ್ಯಾಯಾಲಯದ ದಕ್ಷಿಣ ವಲಯದ ಹಸಿರು ಪೀಠ ಕೊಲ್ಲೂರು ಪರಿಸರದ ಮಾಲಿನ್ಯ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮಹತ್ತರವಾದ ನಿರ್ದೇಶನ ನೀಡಿದೆ. ಈ ಬಗ್ಗೆ ಅರ್ಜಿದಾರ ಹರೀಶ್ ತೋಳಾರ್ ಕೊಲ್ಲೂರು ತಿಳಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸುತ್ತಿರುವ ಹಸಿರು ಪೀಠದ ನ್ಯಾಯ ಮೂರ್ತಿಗಳಾದ ಪುಷ್ಪಾ ಸತ್ಯನಾರಾಯಣ ಜೆಎಂ ಹಾಗೂ ಡಾ.ಸತ್ಯ ಗೋಪಾಲ್ ಕೊರ್ಲಪತಿ ಇಎಂ ಜು.9ರಂದು ನೀಡಿರುವ ನಿರ್ದೇಶನದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.