
Kundapur: ತಾಮ್ರದ ವಸ್ತುಗಳನ್ನು ಕಳವುಗೈದ ಪ್ರಕರಣ; ನಾಲ್ವರ ಬಂಧನ
19/07/2025 07:31 AM
ಕು0ದಾಪುರದ ಸಂತೆ ಮಾರ್ಕೆಟ್ ಬಳಿ ಅಂಗಡಿಯ ಶಟರ್ ತಾಮ್ರ ಹಾಗೂ ಹಿತ್ತಾಳೆಯ ವಸ್ತುಗಳನ್ನು ಕಳವುಗೈದ ನಾಲ್ವರು ಕಳ್ಳರನ್ನು ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಎಂದು ಗುರುತಿಸಲಾಗಿದೆ. ಬಂಧಿತರಿ0ದ 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಉಡುಪಿಯ ಸಂತೆ ಕಟ್ಟೆಯಲ್ಲಿ ಬಂಧಿಸಲಾಗಿದೆ. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರೆಸರ್, 45 ಹಳೆಯ ಮೊಬೈಲ್ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ನಗರ ಠಾಣಾ ಎಸ್ ಐಗಳಾದ ನಂಜಾ ನಾಯ್ಕ್, ಪುಷ್ಪಾ, ಸಂಚಾರ ಠಾಣಾ ಎಸ್ ಐ ನೂತನ್, ಸಿಬಂದಿಯಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.