
Kundapur: ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆೆ; ಎಸ್‌ಪಿ ಹರಿರಾಂ ಶಂಕರ್ ಚಾಲನೆ
23/07/2025
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಎಲ್ಲಾ ಮಾಧ್ಯಮಗಳ ಲೋಗೋಗಳನ್ನು ಒಳಗೊಂಡ ವಿನ್ಯಾಸದ ಫಲಕವನ್ನು ಅನಾವರಣಗೊಳಿಸಿದರು. ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ. ಕುಂದರ್ ಸಾಧಕ ಪತ್ರಕರ್ತರನ್ನು ಸನ್ಮಾನಿಸಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಪಾಧ್ಯಕ್ಷ ವಿನಯ ಪಾಯಸ್, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಮೊದಲಾದವರು ಭಾಗವಹಿಸಿದ್ದರು.