
Madikeri: ನಿರಂತರ ಸುರಿದ ಮಳೆ; ಮನೆಯ ಗೋಡೆ ಕುಸಿದು ಮಹಿಳೆ ಸಾವು
26/07/2025
ಭಾರೀ ಗಾಳಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಹಾನಗಲ್ಲು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಲಬುರಗಿ ಜಿಲ್ಲೆಯ ನಿವಾಸಿ ರವಿ ಎಂಬವರ ಪತ್ನಿ ಸುಷ್ಮಾ ಮೃತಪಟ್ಟವರು.
ರವಿ ಅವರು ಪತ್ನಿ ಸುಷ್ಮಾ ಹಾಗೂ ಮೂವರು ಮಕ್ಕಳೊಂದಿಗೆ ಹಾನಗಲ್ಲು ಗ್ರಾಮದ ಎ.ಎನ್.ಸಚಿನ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದರು. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದುಬಿದ್ದಿದೆ. ಅದರಡಿಗೆ ಸಿಲುಕಿ ಸುಷ್ಮಾ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ತಮ್ಮ ಅಕ್ಷಯ್ ಎಂಬವರಿಗೆ ಭುಜಕ್ಕೆ ಗಾಯವಾಗಿದ್ದು, ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.