
Malpe: ಕಡಲ ತೀರದಲ್ಲಿ ಯುವಕನ ಶವ ಪತ್ತೆ; ಮಲ್ಪೆ ಪೊಲೀಸರಿಂದ ಪರಿಶೀಲನೆ
30/07/2025
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಗದಗ ಮೂಲದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳಕ್ಕೆ ಧಾವಿಸಿ, ಶವವನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.