Mangalore:  ಬಿಹಾರ ಉದ್ಯಮಿಗೆ 10 ಕೋಟಿ ವಂಚನೆ; ಸಿಐಡಿಯಿಂದ ರೋಶನ್ ಸಲ್ದಾನ ವಿಚಾರಣೆ

Mangalore: ಬಿಹಾರ ಉದ್ಯಮಿಗೆ 10 ಕೋಟಿ ವಂಚನೆ; ಸಿಐಡಿಯಿಂದ ರೋಶನ್ ಸಲ್ದಾನ ವಿಚಾರಣೆ


ಉದ್ಯಮಿಗಳಿಗೆ ಬಹು ಕೋಟಿ ವಂಚಿಸಿ ಐಶಾರಾಮಿ ಜೀವನ ನಡೆಸುತ್ತಿದ್ದ ಮಂಗಳೂರಿನ ರೋಶನ್ ಸಲ್ದಾನ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. 

ದೇಶಾದ್ಯಂತ ಉದ್ಯಮಿಗಳನ್ನು ಗುರಿಯಾಗಿಸಿ ಮೋಸದ ಜಾಲ ಬೀಸುತ್ತಿದ್ದ ರೋಶನ್ ಸಲ್ದಾನ ವಿರುದ್ಧ ಬಿಹಾರ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಕೇಸು ದಾಖಲಿಸಿದ್ದರು. ತನಗೆ 10 ಕೋಟಿ ಗೂ ಮಿಕ್ಕಿ ಮೋಸ ಮಾಡಿದ್ದಾಗಿ ದೂರು ನೀಡಿದ್ದಾರೆ. 10 ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ, ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸ್ ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಈವರೆಗೆ ಒಟ್ಟು 50 ಕೋಟಿಗೂ ಹೆಚ್ಚು ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬಿಹಾರ ಮೂಲದ ಉದ್ಯಮಿಯ ಪ್ರಕರಣ ಹೊರತುಪಡಿಸಿ ಉಳಿದ ಪ್ರಕರಣವನ್ನು ಮಂಗಳೂರು ಪೊಲೀಸರೇ ತನಿಖೆ ನಡೆಸಲಿದ್ದಾರೆ. 


ಈ ನಡುವೆ ಜುಲೈ 22ರಂದು ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ತನಗೆ ರೋಶನ್‌ನಿಂದ 1 ಕೋಟಿ ರೂಪಾಯಿ ವಂಚನೆ ಆಗಿದೆ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅವರ ದೂರನ್ನು ಆಧರಿಸಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ರೋಶನ್ ವಿರುದ್ಧ ಸಿಐಡಿಗೆ ವಹಿಸಿದ ಪ್ರಕರಣ ಸೇರಿ ಎರಡು ಪ್ರಕರಣ ಈ ಹಿಂದೆ ದಾಖಲಾಗಿತ್ತು. ಇತ್ತೀಚೆಗೆ ಆತನನ್ನು ಬಂಧಿಸಿದ ಬಳಿಕ ಮಹಾರಾಷ್ಟ್ರದ ಉದ್ಯಮಿಗೆ 5 ಕೋಟಿ ರೂಪಾಯಿ ಮತ್ತು ಅಸ್ಸಾಂ ಮೂಲದ ವ್ಯಕ್ತಿಗೆ 20 ಲಕ್ಷ ವಂಚನೆ ಮಾಡಿರುವ ಕುರಿತಂತೆ ಪ್ರಕರಣ ದಾಖಲಾಗಿತ್ತು. ಇದಲ್ಲದೆ ಚಿತ್ರದುರ್ಗ ನಗರ ಠಾಣೆಯಲ್ಲೂ ಆಂಧ್ರದ ಉದ್ಯಮಿಗೆ 40 ಲಕ್ಷ ರೂಪಾಯಿ ವಂಚನೆ ಮಾಡಿರುವ ಕುರಿತು ಕೇಸ್ ದಾಖಲಾಗಿದೆ.



Ads on article

Advertise in articles 1

advertising articles 2

Advertise under the article