-->
ಷೇರುಮಾರುಕಟ್ಟೆಯಲ್ಲಿ ಹೂಡಿಕೆ: 44 ಲಕ್ಷ ರೂಪಾಯಿ ವಂಚನೆ

ಷೇರುಮಾರುಕಟ್ಟೆಯಲ್ಲಿ ಹೂಡಿಕೆ: 44 ಲಕ್ಷ ರೂಪಾಯಿ ವಂಚನೆ


ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆಯಿಂದ ಲಾಭಾಂಶ ದೊರೆಯುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 44 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಪರಿಚಯ ಮಾಡಿಕೊಂಡು, ಇನ್‌ಟ್ರಾ ಟ್ರೇಡಿಂಗ್ ಆಂಡ್ ಸ್ಟಾಕ್ ಮಾರ್ಕೆಟಿಂಗ್ ಬಗ್ಗೆ ತಿಳಿಸಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾನೆ. ದೂರುದಾರರರು, ಮೊದಲಿಗೆ ನಿರಾಕರಿಸಿದರೂ ಬಳಿಕ ಆತನ ಪ್ರಚೋದನೆಗೆ ಒಳಗಾಗಿ ಸುಮಾರು 44 ಲಕ್ಷ ರೂ.ಗಳನ್ನು ಹಂತ ಹಂತವಾಗಿ ಹೂಡಿಕೆ ಮಾಡಿದ್ದಾರೆ. ಅನಂತರದ ದಿನಗಳಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಸ್ವಲ್ಪ ಮೊತ್ತವನ್ನು ಹಿಂದಕ್ಕೆ ಪಡೆದಿದ್ದಾರೆ. ಆದರೆ ಇನ್ನುಳಿದ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ಇನ್ನೂ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದು, ಅನುಮಾನ ಬಂದು ಸ್ನೇಹಿತರಲ್ಲಿ ವಿಚಾರಿಸದಾಗ ಮೋಸ ಹೋಗಿರುವುದು ಅರಿವಾಗಿದೆ. ಬಳಿಕ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

----------------------

 

Ads on article

Advertise in articles 1

advertising articles 2

Advertise under the article