Mangalore:  ಮಂಗಳೂರಿನಲ್ಲಿ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಧರಣಿ

Mangalore: ಮಂಗಳೂರಿನಲ್ಲಿ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಧರಣಿ


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳೂರಿನ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನೇತೃತ್ವದಲ್ಲಿ ಪಾಲಿಕೆ ನೌಕರರು ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರವೂ ಮುಂದುವರಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು. 

ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ್ ರವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ ಕೂಡಲೇ ಸಭೆ ಕರೆಯಿರಿ ಎಂದು ಮನವಿ ಮಾಡಿದರು. ಶಾಸಕರ ಸಲಹೆಯ ಮೇರೆಗೆ ಕಾರ್ಯದರ್ಶಿಗಳು ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು ಇಲ್ಲಿನ ಪ್ರಮುಖರೊಂದಿಗೆ ಶುಕ್ರವಾರ ಮಧ್ಯಾಹ್ನವೇ ಸಭೆ ನಡೆಸುತ್ತೇವೆಂದು ತಿಳಿಸಿದರು. ಶಾಸಕರು ಅದನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿ, ಪ್ರತಿಭಟನೆ ನಿಮ್ಮ ಸಂವಿಧಾನಬದ್ಧ ಹಕ್ಕು, ಅದಕ್ಕೆ ಅಭ್ಯಂತರವಿಲ್ಲ. ಆದರೆ ನಗರದಲ್ಲಿ ಕಸ ವಿಲೇವಾರಿ ಸೇರಿದಂತೆ ಅನೇಕ ಕೆಲಸಗಳು ಸ್ಥಗಿತಗೊಂಡ ಪರಿಣಾಮ ಸಮಸ್ಯೆಯಾಗಿದೆ. ನಿಮ್ಮ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡುತ್ತೇನೆ ಎಂದು ಶಾಸಕರು ಭರವಸೆ ನೀಡಿದರು. 




Ads on article

Advertise in articles 1

advertising articles 2

Advertise under the article