Mangalore: ಪತ್ರಕರ್ತರಿಗಾಗಿ ಮಾನ್ಸೂನ್ ಸಂಭ್ರಮ; ಕೆಸರು ಗದ್ದೆಯಲ್ಲಿ ಕ್ರೀಡಾಕೂಟ ಆಯೋಜನೆ

Mangalore: ಪತ್ರಕರ್ತರಿಗಾಗಿ ಮಾನ್ಸೂನ್ ಸಂಭ್ರಮ; ಕೆಸರು ಗದ್ದೆಯಲ್ಲಿ ಕ್ರೀಡಾಕೂಟ ಆಯೋಜನೆ


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಅಂಗವಾಗಿ ನೀರುಮಾರ್ಗ ಪಡು ಬದಿನಡಿ ಸಮೀಪದ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ ಕಾರ್ಯಕ್ರಮ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಹಾಗೂ ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ಪಡು ಸಹಭಾಗಿತ್ವದಲ್ಲಿ ಪತ್ರಕರ್ತರ ತಾಲೂಕು ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಕಾಐðಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಡಿಯೋ ಜರ್ನಲಿಸ್ಟ್ ದಿ. ನಾಗೇಶ್ ಪಡು ವೇದಿಕೆಯಲ್ಲಿ ಬೆಳಗ್ಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ಪತ್ರಕರ್ತರು, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿಶೇಷವಾಗಿ ತುಳುನಾಡಿನ ತಿಂಡಿ- ತಿನಿಸುಗಳನ್ನು ಸವಿಯುವ ಅವಕಾಶವನ್ನೂ ಮಾಡಿಕೊಡಲಾಗಿತ್ತು.




ಪ್ರಗತಿಪರ ಕೃಷಿಕ ಪದ್ಮನಾಭ ಕೋಟ್ಯಾನ್ ಕೆಸರು ಗದ್ದೆಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನೀರು ಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಚಿಕ್ಕ ಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿದರು.ಪಡು ಶ್ರೀ ವಿಘ್ನೇಶ್ವರ ಗ್ರಾಮೀಣಾ ಭಿವೃದ್ಧಿ ಸೇವಾಸಮಿತಿಯ ಅಧ್ಯಕ್ಷ ಜಯಂತ್ ಅಮೀನ್ ಕೋರೆಟ್ಟು ವೈಯಕ್ತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ಶುಭ ಹಾರೈಸಿದರು.



ರಾಜ್ ಕುಮಾರ್ ಶೆಟ್ಟಿ ತಿರುವೈಲು,ಸತೀಶ್ ಅಂಚನ್ ಕಂಪ, ಸಂತೋಷ್ ಕುಮಾರ್, ಗೋಪಾಲ ಕೃಷ್ಣ ಭಂಡಾರಿ ಪಡು,ಕುಂಞಣ್ಣ ಶೆಟ್ಟಿ ಕೋರೆಟ್ಟುಗುತ್ತು,ತಿಲಕ ರಾಜ್ ಕೋರಟ್ಟು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ, ಕಾರ್ಯಕಾರಿ ಸಮಿತಿ ಸದಸ್ಯ ವಿಲ್ಫ್ರೆಡ್ ಡಿ ಸೋಜ ಮೊದಲಾದವರು ಉಪಸ್ಥಿತರಿದ್ದರು.







Ads on article

Advertise in articles 1

advertising articles 2

Advertise under the article