ಮಂಗಳೂರಿನ ಪಂಪ್‌ವೆಲ್ ಬಳಿಯ ಪಶು ಆಹಾರ, ಕೃಷಿ ಉತ್ಪನ್ನ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಜುಲೈ 29ರಂದು ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಘಟನಾಸ್ಥಳಕ್ಕೆ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.