Mangalore: ಭಾರೀ ಮಳೆ; ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ
26/07/2025
ದ.ಕ. ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ, ಅದರಲ್ಲೂ ಬೆಳ್ತಂಗಡಿ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ26ರಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.