
Mangalore: ಬಿಜೈ ಭಾರತಿ ಬಿಲ್ಡರ್ಸ್ ಕಚೇರಿ ಶೂಟೌಟ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
27/07/2025
ಸುಮಾರು 10 ವರ್ಷದಿಂದ ತಲೆಮರೆಸಿಕೊಂಡಿದ್ದ ಶೂಟೌಟ್ ಪ್ರಕರಣದ ಆರೋಪಿಯನ್ನು ಮಂಗಳೂರಿನ ಉರ್ವಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಬಂಧಿತ ಆರೋಪಿ.
ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ಕರಾಡ್ ಗಣೇಶ್ 2015ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮಂಗಳೂರಿನ ಜೆಎಂಎಫ್ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.