Mangalore: ಕಾರ್ಗಿಲ್ ವಿಜಯ ದಿವಸ; ಹುತಾತ್ಮ ಯೋಧರಿಗೆ ಗೌರವಾರ್ಪಣೆ

Mangalore: ಕಾರ್ಗಿಲ್ ವಿಜಯ ದಿವಸ; ಹುತಾತ್ಮ ಯೋಧರಿಗೆ ಗೌರವಾರ್ಪಣೆ


ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. 


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರ0ತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು ಎಂದರು.


ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ,  ಪೂರ್ಣಿಮಾ, ಗಣೇಶ್ ಕಾರ್ಣಿಕ್, ರವಿಶಂಕರ್ ಮಿಜಾರ್, ಅಶ್ವಿತ್ ಕೊಟ್ಟಾರಿ, ನಿಕಟಪೂರ್ವ ಮ.ನ.ಪಾ ಸದಸ್ಯರುಗಳು, ಮಾಜಿ ಸೈನಿಕರು ಉಪಸ್ಥಿತರಿದ್ದರು.



Ads on article

Advertise in articles 1

advertising articles 2

Advertise under the article