ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜು.25ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.